ಹುಬ್ಬಳ್ಳಿ : ಕೋವಿಡ್ ಸೆಂಟರ್‌ನಲ್ಲಿಯೇ ಮೊಬೈಲ್ ಕಳ್ಳತನ ಮಾಡಿರುವ ಘಟನೆಯೊಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ಸೆಂಟರ್ ನಲ್ಲಿ ನಡೆದಿದ್ದು, ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಇನ್ನೂ ಕಳ್ಳತನ ಮಾಡಿರುವ ದೃಶ್ಯ ಹಾಗೂ ಕಳ್ಳನ ಸಂಪೂರ್ಣ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಾಕಿ ಕಳ್ಳ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ ಮಾಡಿದ್ದಾನೆ. ಕಿಮ್ಸ್ ಸಿಬ್ಬಂದಿಯ ಐವತ್ತು ಸಾವಿರ ಬೆಲೆಯುಳ್ಳ ಮೊಬೈಲ್ ಕಳ್ಳತನ ಮಾಡಿದ್ದಾನೆ.
ತಮ್ಮ ಪ್ರಾಣವನ್ನು ಪಣಕಿಟ್ಟು ಚಿಕಿತ್ಸೆ ನೀಡುತ್ತಿರುವ ಕಿಮ್ಸ್ ಸಿಬ್ಬಂದಿಯ ಮೊಬೈಲ್ ಗೆ ಕಳ್ಳ ತನ್ನ ಕೈ ಚಳಕ ತೋರಿಸಿದ್ದಾನೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.