ಧಾರವಾಡ : ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ.
ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಎಂಬುವವರೇ ಹಲ್ಲೆಗೊಳಗಾದ ವ್ಯಕ್ತಿ.
ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಕ್ರಿಕೆಟ್ ಆಡಬೇಡಿ. ಸೆಮಿ ಲಾಕ್ ಡೌನ್ ಇದೆ. ಮನೆಗೆ ಹೋಗಿ ಎಲ್ಲರೂ ಮಾಸ್ಕ್ ಧರಿಸಿಕೊಳ್ಳಿ ಎಂದು ಹೇಳಿದ್ದಕ್ಕೆ ಹಲ್ಲೆ ಮಾಡಿದ್ದು, ಹಲ್ಲೆ ಮಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.