ಹುಬ್ಬಳ್ಳಿ : ಕೇಂದ್ರ ಸರ್ಕಾರದ ಎಂ.ಇ.ಸಿ.ಎಲ್ ಕಂಪನಿಯ ಸಿ.ಎಸ್.ಆರ್ ನಿಧಿಯಡಿ ನೀಡಲಾದ 10 ಲೀಟರ್ ಸಾಮರ್ಥ್ಯದ 51 ಆಕ್ಸಿಜನ್ ಕಾನ್ಸಟ್ರೇಟರ್ಸ್ ಹಾಗೂ ಯುನಿಟೈಡ್ ವೇ ಬೆಂಗಳೂರು ಕಂಪನಿ ಕಡೆಯಿಂದ ನೀಡಲಾದ 100 ಆಕ್ಸಿಜನ್ ತುಂಬಲು ಅನುವಾಗುವ ಖಾಲಿ ಸಿಲೆಂಡರ್‌ಗಳನ್ನು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ , ಶಾಸಕರಾದ ಅರವಿಂದ ಬೆಲ್ಲದ್, ಪ್ರದೀಪ್ ಶೆಟ್ಟರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲ್ಬುರ್ಗಿ, ಜಿ್ಳಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ.ಸಿಇಓ ಡಾ.ಬಿ.ಸುಶೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
*ತಾಲೂಕು ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸ್‌ಟ್ರೇಟರ್ಸ್ ಹಂಚಿಕೆ*
ಜಿಲ್ಲಾಡಳಿತಕ್ಕೆ ಇಂದು ಹಸ್ತಾಂತರಿಸಲಾದ ಆಕ್ಸಿಜನ್ ಕಾನ್ಸ್‌ಟ್ರೇಟರ್ಸ್‌ಗಳಲ್ಲಿ ಕಲಘಟಗಿ 10, ಕುಂದಗೋಳ 10, ನವಲುಗಂದ 10, ಅಣ್ಣಿಗೇರಿ ಹಾಗೂ ಅಳ್ನಾವರಕ್ಕೆ ತಲಾ 5 ಕಾನ್ಸ್‌ಟ್ರೇಟರ್ಸ್ ಹಂಚಿಕೆ ಮಾಡಲಾಗಿದೆ. ಉಳಿದ ಕಾನ್ಸ್‌ಟ್ರೇಟರ್ಸ್‌ಗಳು ಹಾಗೂ ಖಾಲಿ ಸಿಲೆಂಡರ್‌ಗಳನ್ನು ಅಗತ್ಯಾನುಸಾರ ಹಂಚಿಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Hubli News Latest Kannada News