ಹುಬ್ಬಳ್ಳಿ : ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ. ಇಡೀ ದೇಶದಲ್ಲಿ ಇದ್ದ 50 ರಿಂದ 60 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದೀಗ ಸಾವಿರಾರು ಸಂಖ್ಯೆಯಲ್ಲಿ ಹೆಚ್ಚಾಗುತ್ತಿವೆ. ಇದಕ್ಕೆ ಬೇಕಾದಂತಹ ಔಷಧಿ ಇರಲಿಲ್ಲ. ಹೀಗಾಗಿ ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿನಗರದಲ್ಲಿಂದು ಮಾತನಾಡಿದ ಅವರು, ಹಂತ ಹಂತವಾಗಿ ಎಲ್ಲ ರಾಜ್ಯಗಳಿಗೂ ಔಷಧಿ ಪೂರೈಕೆ ಮಾಡಲಾಗುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸದಾನಂದಗೌಡ, ಔಷಧಿ ಉಸ್ತುವಾರಿ ಮನ್ಸುಖ್ ಮಾಂಡವೆ ಅವರ ಜೊತೆ ಚರ್ಚೆ ಮಾಡಿದ್ದಾರೆ ಎಂದರು. ಕೇಂದ್ರ ಸಚಿವ ಸದಾನಂದಗೌಡಸಿದ್ದರಾಮಯ್ಯ ಲೆಟರ್ ವಾರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರೇ ಈ ಹಿಂದೆ ಡಿಸಿಗಳ ಜತೆ ವಿಪಕ್ಷ ನಾಯಕರು ಸಭೆ ನಡೆಸಬಾರದು ಎಂಬ ಸುತ್ತೋಲೆ ಹೊರಡಿಸಿದ್ದರು. ಬಿಎಸ್ವೈ ಹಾಗೂ ಜಗದೀಶ್ ಶೆಟ್ಟರ್ ವಿಪಕ್ಷ ನಾಯಕರಾಗಿದ್ದಾಗ ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ಈಗ ಅವರ ಸುತ್ತೋಲೆಯಂತೆ ಸಿದ್ದರಾಮಯ್ಯನವರು ನಡೆದುಕೊಳ್ಳಲಿ ಎಂದು ಟಾಂಗ್ ನೀಡಿದರು.
Hubli News Latest Kannada News