ಹುಬ್ಬಳ್ಳಿ: ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಹು-ಧಾ ಮಹಾನಗರ ಪಾಲಿಕೆ ಒಡೆತನದ 03 “ನಗರ ಪ್ರಾಥಮಿಕ ಆರೋಗ್ಯ ಕೇಂದ್ರ” ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿ ಇನ್ನಷ್ಟು ಸೌಲಭ್ಯಗಳೊಂದಿಗೆ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಸಿಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಇಂದು ಇಂದಿರಾ ಗಾಜಿನಮನೆ ಆವರಣದಲ್ಲಿ ನಡೆದ ಕೋವಿಡ್-19 ನಿರ್ವಹಣಾ ಸಭೆಯ ನಂತರ ಮಾನ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಶ್ರೀ ಡಾ. ಕೆ. ಸುಧಾಕರ್ ಅವರಿಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಪ್ರಸ್ತಾವನೆ ಸಲ್ಲಿಸಿದರು.
