ಹುಬ್ಬಳ್ಳಿ:ಅಂಜುಮನ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ, ಹುಬ್ಬಳ್ಳಿ ಸ್ಟೇಷನ್ ರಸ್ತೆಯ ಅಂಜುಮನ್ ಕಾಂಪ್ಲೆಕ್ಸ್‌ನಲ್ಲಿ ಸ್ಥಾಪಿಸಲಾಗಿರುವ 25 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್, ಅಂಜುಮನ್ ಸಂಸ್ಥೆ ಅಧ್ಯಕ್ಷ ಮಹಮದ್ ಯೂಸಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು, ಕಾರ್ಯದರ್ಶಿಗಳಾದ ಅಬ್ದುಲ್ ಮುನಾಫ್ ದೇವಗರಿ, ಎಂ.ಎ.ಫಠಾಣ್, ಅಂಜುಮನ್ ಆಸ್ಪತ್ರೆಯ ಅಕ್ಬರ್ ಕುಮಟಾಕರ್, ಎಸ್.ಬೆಳಗಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.