Home / Top News / ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ

Spread the love

ಹುಬ್ಬಳ್ಳಿ: ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ನಗರದ ವಿವಿಧೆಡೆ ಬುಲೆಟ್ ಬೈಕ್ ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು.

ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದ್ದು, ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಇಂದು ಶಾಸಕ ಪ್ರಸಾದ್ ಅಬ್ಬಯ್ಯ, .ಮಾಜಿ ಸಚಿವ ಎ.ಎಮ್.ಹಿಂಡಸಗಿರಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕಳೆದ 12 ತಿಂಗಳುಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ರೂ.30 ರಷ್ಟು ಹೆಚ್ಚಳವಾಗಿದೆ. ಇದೀಗ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಇದೀಗ ತೈಲ ಬೆಲೆ ರೂ.100ರ ಗಡಿ ದಾಡಿದೆ. ಇದು ಅಂತರಾಷ್ಟ್ರೀಯ ತೈಲ ಕಂಪನಿಗಳು ಏರಿಕೆ ಮಾಡಿದ್ದರಿಂದಾಗಿಲ್ಲ. ಮೋದಿ ಸರ್ಕಾರ್ದ ಇಂಧನದ ಮೇಲಿನ ಕಠಿಣ ತೆರಿಗೆಯಿಂದಾಗಿ ಹೆಚ್ಚಳವಾಗಿದೆ. ಈಗಾಗಲೇ ಉದ್ಯೋಗ ಇಲ್ಲದೆ, ವೇತನ ಕಡಿತಗೊಂಡು ಸಂಕಷ್ಟಕ್ಕೆ ಸಿಲುಕಿರುವ ಸಾಮಾನ್ಯ ಜನರ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ ಕೂಡಲೇ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿರಿವ ಬಂಕ್ ಎದುರು ಬಾಯಿ ಬಾಯಿ ಬಡಿದುಕೊಂಡು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ರಜತ್ ಉಳ್ಳಾಗಡ್ಡಿ ಮಠ, ಸದಾನಂದ ಡಂಗನವರ, ಮಹೇಂದ್ರ ಸಿಂಘಿ, ಬಸವರಾಜ ಕಿತ್ತೂರ ಸೇರಿದಂತೆ ಮುಂತಾದ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]