ಹುಬ್ಬಳ್ಳಿ : ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳೂ,ಭಾಷಾಶಾಸ್ತ್ರಜ್ಞರೂ ಆದ ಪ್ರೊ.ಎಚ್.ಎಂ.ಮಹೇಶ್ವರಯ್ಯ ಅವರ ನಿಧನಕ್ಕೆ ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇವರ ನಿಧನದಿಂದ ನಾಡಿನ ಭಾಷಾಶಾಸ್ತ್ರಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬ ಮತ್ತು ವಿದ್ಯಾರ್ಥಿ ಬಳಗಕ್ಕೆ ಬರಲಿ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.