ಹುಬ್ಬಳ್ಳಿ : ಟೈ ಹುಬ್ಬಳ್ಳಿ ಸಂಸ್ಥೆ ವತಿಯಿಂದ ಕೋವಿಡ್ ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಲೆಂದು ನೀಡಿದ ಅಂಬ್ಯುಲೆನ್ಸ್ ವಾಹನವನ್ನು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಿಮ್ಸ್ ಆಡಳಿತ ಮಂಡಳಿಗೆ ಇಂದು ಹಸ್ತಾಂತರಿಸಿದರು.
ವೈದ್ಯಕೀಯ ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಥಮ ಚಿಕಿತ್ಸೆ ನೀಡಲು ಅನುಕೂಲವಾಗುವ ಸಕಲ ವ್ಯವಸ್ಥೆ ಅಂಬ್ಯುಲೆನ್ಸ್ ವಾಹನದಲ್ಲಿದೆ. ಇದು ಸಾರ್ವಜನಿಕರಿಗೆ ತುಂಬಾ ಸಹಕಾರಿಯಾಗಲಿದೆ. ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಂಡು, ಜನರ ಆರೋಗ್ಯ ದೃಷ್ಟಿಯಿಂದ ಇಂತಹ ಸೇವೆ ಒದಗಿಸುತ್ತಿರುವ ಟೈ ತಂಡಕ್ಕೆ ಸಚಿವ ಜಗದೀಶ್ ಶೆಟ್ಟರ್ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ವಿ.ಆರ್.ಎಲ್. ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಆನಂದ ಸಂಕೇಶ್ವರ್, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ವೈದ್ಯಕೀಯ ಅಧೀಕ್ಷಕ ಡಾ.ಅರುಣ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.