ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದ ಪುನರ್ ನಿರ್ಮಾಣ ಕಾಮಗಾರಿಯ ಪ್ರಯುಕ್ತ ಬಸ್ ನಿಲ್ದಾಣದ ಈಗಿರುವ ಕಟ್ಟಡವನ್ನು ತೆರವುಗೊಳಿಸುವ ಕೆಲಸ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹಳೆ ಬಸ್ ನಿಲ್ದಾಣದಿಂದ ಗ್ರಾಮೀಣ ಪ್ರದೇಶಗಳಿಗರ ಸಂಚರಿಸುತ್ತಿದ್ದ ಎಲ್ಲಾ ಬಸ್ಸುಗಳನ್ನು ಹೊಸೂರು ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ.
ಅದರಂತೆ ಕುಂದಗೋಳ, ಸಂಶಿ, ಶಿರಹಟ್ಟಿ, ಹುಲಗೂರ, ಕಲಘಟಗಿ, ತಡಸ, ನವಲಗುಂದ, ಅಣ್ಣಿಗೇರಿ ಮತ್ತಿತರ ಗ್ರಾಮೀಣ ಸ್ಥಳಗಳಿಗೆ ಹೋಗವ ಎಲ್ಲಾ ಬಸ್ಸುಗಳು ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ.