ಹುಬ್ಬಳ್ಳಿ : ನಗರದ ಹಳೇ ಬಸ್ ನಿಲ್ದಾಣ ಮತ್ತು ರೇಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಹಳೇ ಬಸ್ ನಿಲ್ದಾಣದ ಜಾಹೀರಾತು ಫಲಕದ ಹಿಂಭಾಗದಲ್ಲಿ ಟೆಲಿಪೋನ್ ವೈಯರ್ ನಿಂದ ನೇಣು ಹಾಕಿಕೊಂಡಿರುವ ಬಗ್ಗೆ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಷ್ಟರಲ್ಲೆ ಮತ್ತೋರ್ವ ವ್ಯಕ್ತಿ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನೇಣು ಹಾಕಿಕೊಂಡು, ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ರೇಲ್ವೆ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಎರಡೂ ಘಟನೆಗಳ ಬಗ್ಗೆ ಸಂಬಂಧಿಸಿದ ಠಾಣೆಗಳಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.
Hubli News Latest Kannada News