ಇತ್ತೀಚಿನ ದಿನಗಳಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಪತ್ರಕರ್ತರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆದಿದ್ದು ಹಲವಾರು ಕಡೆ ಆರ್ಟಿಐ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಹಲ್ಲೆ ಮಾಡಲಾಗುತ್ತಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂತಹ ಕೃತ್ಯ ನಡೆಯದಂತೆ ಪತ್ರಕರ್ತರು ಮತ್ತು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿಧ್ರೋಹವಾಗುತ್ತಿದ್ದು ಇಂತಹ ಕುಕೃತ್ಯ ಎಸಗುವ ಅಪರಾಧಿಗಳಿಗೆ ಉಗ್ರ ಶಿಕ್ಷೆ,ವಿಶೇಷ ಕಾನೂನು ಜಾರಿ ಮಾಡಬೇಕೆಂದು ಗಂಗಾಧರ ದೊಡವಾಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ ಈಗಾಗಲೇ ದೇಶದಲ್ಲಿ ಅಪರಾಧ ಮತ್ತು ಭ್ರಷ್ಟಾಚಾರ ತಡೆಗೆ ಅನೇಕ ಕಾನೂನುಗಳು ಮತ್ತು ಕಾನೂನು ವ್ಯಾಪ್ತಿಯ ಇಲಾಖೆಗಳು ಇದ್ದರೂ ಸಹ ಭ್ರಷ್ಟಾಚಾರವನ್ನು ಮತ್ತು ಅಮಾಯಕ ಜನರ ಮೇಲಿನ ದೌರ್ಜನ್ಯ ಗಳನ್ನು ಹತೋಟಿಗೆ ತರಲು ಸಾಧ್ಯವಾಗುತ್ತಿಲ್ಲವೆಂದೂ ದೊಡವಾಡ ವಿಷಾದ ವ್ಯಕ್ತಪಡಿಸಿದ್ದಾರೆ.
