ಹುಬ್ಬಳ್ಳಿ : ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಆದ ಪರಿಣಾಮ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ಇರುವ, ಸ್ಮಾಲ್ ಬ್ರಿಜ್ ಬಳಿ ನಡೆದಿದೆ. ಮಳೆ ಹೆಚ್ಚಾಗಿ ಬರುತ್ತಿರುವ ಕಾರಣದಿಂದ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡ ಮತ್ತೊಬ್ಬನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಉತ್ತರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಒಂದೇ ದಿನದಲ್ಲಿ ಎರಡು ಅಪಘಾತಗಳು ನಡೆದಿದ್ದು ಹುಬ್ಬಳ್ಳಿ ಜನರಲ್ಲಿ ಆತಂಕ ಮೂಡಿಸಿದೆ.
