ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿಯೇ ಪ್ರತಿಭಟನೆ ನಡೆಸುವ ಮೂಲಕ ನ್ಯಾಶನಲ್ ಸ್ಟೂಡೆಂಟ್ ಯುನಿಯನ್ ಆಫ್ ಇಂಡಿಯಾ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬೆಸ್ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಿ ಡಿಪ್ಲೊಮಾ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿವಿಧಾನಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ಕೂಡಲೇ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.
ಕಿಲ್ಲರ್ ಕೊರೋನಾ ವೈರಸ್ ಭೀತಿ ಹಿನ್ನಲೆಯಲ್ಲಿಯೂ ಕೂಡ ಕೆಲವೊಂದು ವಿಶ್ವವಿದ್ಯಾಲಯಗಳು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದು,ಖಂಡನೀಯವಾಗಿದೆ. ಕೂಡಲೇ ಬೆಸ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಿ ಡಿಪ್ಲೊಮಾ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿದರು.