ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಅಧಿಕಾರವಧಿಯಲ್ಲಿ ಹೈದರಾಬಾದ್ ಕರ್ನಾಟಕದ ಬೀದರ್, ಯಾದಗಿರಿ, ಗುಲ್ಬರ್ಗಾ, ಬಿಜಾಪುರ, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳನ್ನು ಸೇರಿಸಿ ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸದೊಂದು ಚರಿತ್ರೆಯನ್ನು ಬರೆದಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ ಅದೇ ರೀತಿ ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳನ್ನು ಸೇರಿಸಿ *ಚೆನ್ನಮ್ಮನ ಕರ್ನಾಟಕ* ಎಂದು ಮರು ನಾಮಕರಣ ಮಾಡಬೇಕೆಂದು ನೂತನ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಯವರನ್ನು ಒತ್ತಾಯಿಸಿದ್ದಾರೆ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಮಹಿಳಾ ಕುಲಕ್ಕೆ ಸ್ಫೂರ್ತಿಯಾಗಿರುವ ಕಿತ್ತೂರ ನಾಡಿನ ಸಾಮ್ರಾಜ್ಞೆ ಚೆನ್ನಮ್ಮ ತಾಯಿಯವರ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ತಕ್ಷಣವೇ ಕ್ರಮ ಕೈಗೊಂಡು *ಚೆನ್ನಮ್ಮನ ಕರ್ನಾಟಕ* ವೆಂದು ಮರುನಾಮಕರಣ ಮಾಡಿ ಈ ನೆಲದ ಸ್ವಾತಂತ್ರ್ಯಕ್ಕಾಗಿ ಆಂಗ್ಲ ರೊಂದಿಗೆ ಸೆಣಸ್ಯಾಡಿ ತಮ್ಮ ಸರ್ವಸ್ವವನ್ನೇ ಕಳೆದುಕೊಂಡ ಮಹಾನ್ ದೇಶಭಕ್ತರಿಗೆ ಈ ತೆರನಾದ ಗೌರವ ಸಲ್ಲಿಸಬೇಕೆಂದು ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.
