ಶಿಗ್ಗಾಂವ್ ಸವಣೂರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮಾಜಿಮುಖ್ಯಮಂತ್ರಿ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆಗೆ ಚುನಾಯಿತರಾಗಿದ್ದ ಅವರು ನಂತರ ಬಿಜೆಪಿಯ ಸಂಘಟನೆ ಹಾಗೂ ಗೆಲುವಿಗೆ ಸಾಕಷ್ಟು ಕೊಡುಗೆ ನೀಡಿದ್ದರು.
ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಬರಲಿ ಎಂದು ಶೆಟ್ಟರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.