Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಹಾನಗರ ಪಾಲಿಕೆ ಚುನಾವಣೆ ಘೋಷಣೆ: ಸೆಪ್ಟೆಂಬರ್ 3ಕ್ಕೆ ಚುನಾವಣೆ

ಮಹಾನಗರ ಪಾಲಿಕೆ ಚುನಾವಣೆ ಘೋಷಣೆ: ಸೆಪ್ಟೆಂಬರ್ 3ಕ್ಕೆ ಚುನಾವಣೆ

Spread the love

ಹುಬ್ಬಳ್ಳಿ : ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರ ನಡೆಸಿಕೊಂಡು ಬಂದಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ನಿಗದಿಯಾಗಿದೆ. ಹೌದು..ಬಹುದಿನಗಳಿಂದ ಚರ್ಚೆಯಾಗುತ್ತಿದ್ದ ಮಹಾನಗರ ಪಾಲಿಕೆಯ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಹಸಿರು ನಿಶಾನೆ ತೋರಿಸಿದ್ದು, ಆಗಸ್ಟ್ 16ಕ್ಕೆ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ.

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ಹಸಿರು ನಿಶಾನೆ ತೋರಿಸಲಾಗಿದ್ದು, ಸೆಪ್ಟಂಬರ್ 3ಕ್ಕೆ ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ಕ್ಕೆ ಮತ ಎಣಿಕೆ ನಡೆಯಲಿದೆ.

ಹು-ಧಾ ಮಹಾನಗರ ಪಾಲಿಕೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು,ಸೆಪ್ಟಂಬರ್ 3ಕ್ಕೆ ಮತದಾನ, ಸೆಪ್ಟೆಂಬರ್ 6 ಕ್ಕೆ ಮತ ಎಣಿಕೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಯೂ ಆಗಷ್ಟ 16 ರಿಂದ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಆ .23 ಎಂದು ನಿಗದಿಪಡಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯು ಕಳೆದ ಮೂರು ವರ್ಷದಿಂದ ನೆನೆಗುದಿಗೆ ಬಿದ್ದಿತ್ತು. ಆದರೀಗ, ಚುನಾವಣೆ ಪ್ರಕ್ರಿಯೆಗಳಿಗೆ ಚಾಲನೆ ದೊರಕುತ್ತಿರುವುದರಿಂದ ಹೊಸ ಅಲೆ ಆರಂಭವಾಗಲಿದೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]