ಹುಬ್ಬಳ್ಳಿ: ‘ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಣ ರಂಗೇರಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ.
ವಾರ್ಡ್ 47 ರ ರೂಪ ಶೆಟ್ಟಿ ಎಂಬ ಬಿಜೆಪಿ ಅಭ್ಯರ್ಥಿ ಪಾಲಿಕೆ ಚುನಾವಣೆ ಪ್ರಚಾರಕ್ಕೆ ಐಪಿಎಲ್ ಕ್ರಿಕೆಟರ್ ನನ್ನು ಕರೆತಂದು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಗೋವಾದಿಂದ ಹುಬ್ಬಳ್ಳಿಗೆ ಆಗಮಿಸಿದ ಐಪಿಎಲ್ ಕ್ರಿಕೆಟರ್ ಶಾದಬ್ ಜಕಾತಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುವ ಮೂಲಕ ತಮ್ಮ ಅಭ್ಯರ್ಥಿಯನ್ನ ಗೆಲ್ಲುಸುವಂತೆ ಮತದಾರರಲ್ಲಿ ಮನವಿ ಮಾಡಿದರು.