ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ! ಮೂವರ ಯುವತಿಯರ ರಕ್ಷಣೆ
ಹುಬ್ಬಳ್ಳಿ : ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ, ಜೆಸಿ ನಗರದ ಲಾಜ್ಡ್‌ವೊಂದರ ಮೇಲೆ ಶಹರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್ ಸೇರಿ ಐವರನ್ನು ಬಂಧನ ಬಂಧನ ಮಾಡಿದ್ದಾರೆ. ನಗರದ ಕಂಫರ್ಟ್ ಜಯಲಕ್ಷ್ಮೀ ಲಾಡ್ಜ್ ನಲ್ಲಿ ಗ್ರಾಹಕರಿಂದ ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಖಚಿತ ಮಾಹಿತಿ ಮೇರೆಗೆ ಶಹರ ಠಾಣೆ ಇನ್‌ಸ್ಪೆಕ್ಟರ್ ಆನಂದ ಒನಕುದ್ರೆ ನೇತೃತ್ವದ ತಂಡ ದಾಳಿ ನಡೆಸಿ ಮಾಲೀಕ ಮತ್ತು ಮ್ಯಾನೇಜರ್ , ಆಟೋ ಚಾಲಕ ಹಾಗೂ ಇತರರನ್ನು ಬಂಧಿಸಿ, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.