ಹುಬ್ಬಳ್ಳಿ : ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ.
ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಬೊಮ್ಮಾಯಿ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದರು. ಸ್ನೇಹಿತನ ಪಾರ್ಥೀವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ ದರ್ಶನ ಪಡೆದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಜು ಅವರು ಹೃದಯಾಘಾತದಿಂದಾಗಿ ಬುಧವಾರ ನಿಧನರಾಗಿದ್ದರು.