ಜಮೀನಿಂದ ಕೆಲಸ ಮುಗಿಸಿಕೊಂಡು ಮನೆಗೆ ಮರಳುವ ವೇಳೆ ರೈತನಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನಪ್ಪಿ, ಜೊತೆಗಿದ್ದ ಪತ್ನಿಗೂ ಗಂಭೀರವಾದ ಗಾಯವಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸೈದಾಪುರ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದ್ದು, ಸಂಗಪ್ಪ ಪಕ್ಕಿರಪ್ಪ ವಾರದ (48) ಮೃತ ರೈತನಾಗಿದ್ದಾನೆ. ಇನ್ನೂ ಘಟನೆಯಲ್ಲಿ ಮೃತ ಸಂಗಪ್ಪ ಪತ್ನಿಗೂ ಗಂಭೀರ ಗಾಯವಾಗಿದ್ದು, ಅವರನ್ನು ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಯ ಕುರಿತು ಸ್ಥಳಿಯರ ಹಾಗೂ ಕುಟುಂಬಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಅಣ್ಣಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದು, ಈ ಕುರಿತು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.