ಹುಬ್ಬಳ್ಳಿ : ಉಪಚುನಾವಣೆಯ ಪ್ರಚಾರದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು , ಫುಲ್ ವರ್ಕೌಟ್ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ ಸಿದ್ದರಾಮಯ್ಯ ಅವರು, ಇಂದು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದು, ಹುಬ್ಬಳ್ಳಿಯ ಏರ್ಪೋರ್ಟ್ ಎದುರು ಇರುವ ಖಾಸಗಿ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ವಾಕಿಂಗ್ ಮಾಡಿ ನಂತರ ಜಿಮ್‌ನಲ್ಲಿ ಸೈಕ್ಲಿಂಗ್ ಮಾಡುತ್ತ ವರ್ಕೌಟ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯ ನಾಯಕರು ಸಾಥ್ ನೀಡಿದ್ದಾರೆ.