ಹುಬ್ಬಳ್ಳಿ: ನಗರದ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಗ್ರಾಮ ದೇವತೆಯರಾದ ದ್ಯಾಮವ್ವ, ದುರ್ಗಮ್ಮ ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮದ ನಿಮಿತ್ತ ನಾಳೆಯಿಂದ ನ. 11ರವರೆಗೆ ಪ್ರತಿನಿತ್ಯ ಸಂಜೆ 6 ಗಂಟೆಗೆ ಧರ್ಮ ಜಾಗೃತಿ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮತ್ತಣ್ಣವರ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಮಹಾಬಳೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ(ರಿ) ಆಶ್ರಯದಲ್ಲಿ ನಿರ್ಮಿಸಲಾದ ಗ್ರಾಮದೇವಿ ದೇವಸ್ಥಾನದ ಆವರಣದಲ್ಲಿ ನಡೆಯುವ ಧರ್ಮ ಜಾಗೃತಿ ಸಭೆಯಲ್ಲಿ ಮೂರುಸಾವಿರ ಮಠದ ಜಗದ್ಗುರು ಡಾ.ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮೀಜಿ ಸಹಿತ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದರು.
ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದಲ್ಲಿ ಸೂಡಿ ಜುಕ್ತಿಮಠದ ಡಾ. ಕೊಟ್ಟೂರ ಬಸವೇಶ್ವರ ಶಿವಾಚಾರ್ಯರು ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.