ಹುಬ್ಬಳ್ಳಿ : ಇಸ್ಲಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ವಿರುದ್ಧವಾಗಿ ಉತ್ತರ ಪ್ರದೇಶದ ಸಿಯಾ ಬೋರ್ಡ್ ಚೇರ್ಮನ್ ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು.
ಇಲ್ಲಿನ ತಹಶಿಲ್ದಾರರ ಕಚೇರಿ ಎದುರಿಗೆ ಎಐಎಂಐಎಂ ಪಕ್ಷದ ಧಾರವಾಡ ಜಿಲ್ಲೆಯ ಅಧ್ಯಕ್ಷ ನಜೀರ ಅಹ್ಮದ್ ಹೊನ್ಯಾಳ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅವರು, ವಸೀಮ್ ರಿಜ್ಜಿ ಮೊಹಮ್ಮದ್ ಪೈಗಂಬರ್ ಅವರ ಕುರಿತಾದ ಪುಸ್ತಕವನ್ನು ಬರೆದಿದ್ದು, ಅದರಲ್ಲಿ ಅವಹೇಳನಕಾರಿ ಮತ್ತು ತಪ್ಪು ಮಾಹತಿ ಹರಡುವ ಕೆಲಸ ಮಾಡಿದ್ದಾರೆ. ಕೂಡಲೇ ತಪ್ಪಿತಸ್ಥ ವಸೀಮ್ ರಿಜ್ಜಿ ಅವರಿಗೆ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಾದಾಪೀರ ಬೆಟಗೇರಿ, ದಾದಾಪೀರ ಕಾಳಗೆ, ಮುನ್ನಾ ಕಿತ್ತೂರ, ರಾಕೇಶ ಬಸವರಾಜ, ಇರ್ಫಾನ್ ನಾಲ್ವತವಾಡ ಸೇರಿದಂತೆ ಮುಂತಾದವರು ಇದ್ದರು.
ಜಾಹಿರಾತು…