ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಬವಿಸಿದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಶರ್ಮಾ ಟ್ರಾವೆಲ್ಸ್ ಗೇ ಸೇರಿದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಬೈ ಪಾಸ್ ನಲ್ಲಿ ಮುಖಾಮುಖಿ ಡಿಕ್ಕಿ ಸಂಬವಿಸಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಾಲಕ ಸೇರಿದಂತೆ ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು ಗಾಯಗೊಂಡ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ