ಹುಬ್ಬಳ್ಳಿ : ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ
ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು,
ಎಲ್ಲ ಸಮುದಾಯದ ಮುಖಂಡರ ಜೊತೆ ಕೋವಿಡ್ ಲಸಿಕೆ ಬಗ್ಗೆ ಚರ್ಚೆ ಮಾಡಲಾಗಿದೆ.
ಹುಬ್ಬಳ್ಳಿಯ ಕೆಲ ಏರಿಯಾಗಳಲ್ಲಿ ಲಸಿಕೆ ತೆಗೆದುಕೊಳ್ಳಲು ಮುಂದಾಗಿಲ್ಲ.
ಎಲ್ಲರ ಜೊತೆ ಚರ್ಚೆ ಮಾಡಿ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಎರಡು ಡೋಸ್ ಗಳನ್ನ ಕಡ್ಡಾಯವಾಗಿಸಲು ತೀರ್ಮಾನಿಸಲಾಗಿದೆ.
ಸಿನಿಮಾ ಥಿಯೇಟರ್, ಕಲ್ಯಾಣ ಮಂಟಪ ಸೇರಿದಂತೆ ಕೆಲ ಕಡೆಗಳಲ್ಲಿ ಎರಡೂ ಡೋಸ್ ಲಸಿಕೆ ಪಡೆದರೆ ಮಾತ್ರ ಪ್ರವೇಶಕ್ಕೆ ಸೂಚಿಸಲಾಗಿದೆ.
ಎಲ್ಲಾ ಮಾಲೀಕರಿಗೂ ಸೂಚನೆ ನೀಡಿದ್ದು, ನಾಳೆಯಿಂದ ಅವಳಿ ನಗರದಲ್ಲಿ ಕಟ್ಟು ನಿಟ್ಟಿನ ನಿಯಾಮಾವಳಿ ಜಾರಿಯಾಗಲಿದೆ ಎಂದರು.
ಬೈಟ್ -ನಿತೀಶ್ ಪಾಟೀಲ್, ಜಿಲ್ಲಾಧಿಕಾರಿ
Hubli News Latest Kannada News