ಹುಬ್ಬಳ್ಳಿ : ಕೊರೊನಾ ಸೋಂಕು ದಿನದಿಂದ ದಿನಕ್ಕೆ ಮತ್ತೇ ಭೀತಿ ಹುಟ್ಟಿಸುತ್ತಿದ್ದು, ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಜಾಗೃತಿ ಮೂಡಿಸುತ್ತಿರುವ ಪಾಲಿಕೆಯು಼ ಸಾರ್ವಜನಿಕ ಶೌಚಾಲಯಗಳನ್ನು ಶುಚಿಗೊಳಿಸದೇ ನಿರ್ಲಕ್ಷ್ಯ ತೋರಿದೆ.
ನಗರದ ದೇಶಪಾಂಡೆ ನಗರದಲ್ಲಿರುವ ಸಾರ್ವಜನಿಕ ಶೌಚಾಲಯ ಗಬ್ಬೇದ್ದು ದುರ್ವಾಸನೆ ಬೀರುತ್ತಿದ್ದು,ಶೌಚಾಲಯ ಸಮೀಪವೇ ರೋಟರಿ ಶಾಲೆ ಇದ್ದು ವಿದ್ಯಾರ್ಥಿಗಳು ಹಾಗೂ ನಿತ್ಯ ಸಂಚರಿಸುವ ಸಾರ್ವಜನಿಕರು ಮೂಗು ಮುಚ್ಚಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವವಿದ್ದು, ಆದ್ದರಿಂದ ಸ್ವಚ್ಛತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮಳೆಗಾಲದಲ್ಲಂತೂ ಅವಳಿನಗರದಲ್ಲಿನ ಸಾರ್ವಜನಿಕ ಶೌಚಾಲಯಗಳಿಗೆ ಹೋಗಲು ಹಿಂದೇಟು ಹಾಕುವ ಪರಿಸ್ಥಿತಿ ಇದ್ದು, ಪಾಲಿಕೆ ಹೆಚ್ಚಿನ ಗಮನ ಹರಿಸಿ ಸ್ವಚ್ಚತೆ ಆದ್ಯತೆ ನೀಡುವ ಮೂಲಕ ಸ್ವಚ್ಛ ಪರಿಸರಕ್ಕೆ ಅಣಿಯಾಗಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.