ಹುಬ್ಬಳ್ಳಿ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಧ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿಯನ್ನು ನೀಡಿದ್ದು ಪರಿಶೀಲನೆ ನಡೆಸಿ ಕಾರಿನಲ್ಲಿದ್ದವರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
