ಹುಬ್ಬಳ್ಳಿ : ರಾಜ್ಯದಲ್ಲಿ ಡೆಲ್ಟಾ ಹಾಗೂ ಓಮಿಕ್ರಾನ್ ರೂಪಾಂತರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ತಜ್ಞರ ಸಮಿತಿ ಅಭಿಪ್ರಾಯ ಪಡೆದು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೀದರ್ ನಿಂದ ಹುಬ್ಬಳ್ಳಿಗೆ ವಿಷೇಶ ವಿಮಾನದ ಮೂಲಕ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರರೊಂದಿಗೆ ಮಾತನಾಡಿದರು.
ಸದ್ಯ ರಾಜ್ಯದಲ್ಲಿ ಕಸ್ಟರ್ ರೂಪದಲ್ಲಿ ವೈರಸ್ ಹರಡುತ್ತಿದೆ. ಇದನ್ನು ತಡೆದು ಹಲವಾರು ಸಲಹೆಗಳು ಕೇಳಿಬರುತ್ತಿವೆ. ಎಲ್ಲಾ ಸಲಹೆಗಳನ್ನು ಪರಿಗಣಿಸಿ ತಜ್ಞರೊಂದಿಗೆ ಚರ್ಚಿಸಲಾಗುವುದು. ಸದ್ಯ ವಿಧಾನ ಪರಿಷತ್ ಚುನಾವಣೆ ನಮ್ಮ ಮಂದಿದೆ. ನಂತರ ವಿಧಾನ ಮಂಡಲ ಅಧಿವೇಶ ಪೂರ್ಣಗೊಳ್ಳಬೇಕಿದೆ. ಮುಂದೆ ವರಿಷ್ಠರೊಂದಿಗೆ ಸಲಹೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಕ್ರಮಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಲೋಕಸಭಾ ಸದಸ್ಯ ಶಿವಕುಮಾರ್ ಉದಾಸಿ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ್ ಸೇರಿದಂತೆ ಮತ್ತಿತರರು ಇದ್ದರು.