ಹುಬ್ಬಳ್ಳಿ : ಹುಬ್ಬಳ್ಳಿ ನಗರದ ತಾರಿಹಾಳ ಬೈಪಾಸ್ ಬಳಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಈಗಷ್ಟೇ ನಡೆದಿದೆ.
ಹುಬ್ಬಳ್ಳಿ ಬೈ ಪಾಸ್ ಬಳಿಯ ಬಗಿಚಾ ದಾಬಾ ಬಳಿಯಲ್ಲಿ,ಕೆಲಸ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ದಂಪತಿಗಳಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿ ಮೂರು ಜನ ಗಾಯಗೊಂಡಿದ್ದು.
ಕೂಡಲೇ ಸ್ಥಳಕ್ಕೆ ಧಾವಿಸಿದ ಉತ್ತರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೇ.