ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡಿದ ಹಾಗೂ ಭದ್ರತಾ ವೈಫಲ್ಯಕ್ಕೆ ಕಾರಣವಾದ ಪಂಜಾಬ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂಧರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾತನ ಚಕಮಕಿ ನಡೆಯಿತು.
ಪ್ರತಿಭಟನೆಯ ಮೆರವಣಿಗೆ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಪಂಜಾಬ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ, ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಪಂಜಾಬ್ ಸಿಎಂ ಚರಣಜಿತಗ ಸಿಂಗ್ ಚಿನ್ನಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪಂಜಾಬ್ ರಾಜ್ಯ ಸರ್ಕಾರ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಹದಿನೈದು ನಿಮಿಷಗಳ ಕಾಲ ರಸ್ತೆಯಲ್ಲಿ ನಿಲ್ಲುವಂತೆ ಮಾಡಿ ಅವಮಾನ ಮಾಡಿದೆ. ಪ್ರಧಾನಿಗಳು ರಾಜ್ಯಕ್ಕೆ ಬಂದ ಸಂದರ್ಭದಲ್ಲಿ ಅವರ ಭದ್ರತೆ ಜೊತೆಗೆ ಅವರನ್ನು ಗೌರವಯುತವಾಗಿ ಸ್ವಾಗತ ಮಾಡಿವುದು, ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕರ್ತವ್ಯವಾಗಿರುತ್ತದೆ. ಆದರೆ ಪಂಜಾಬ್ ಮುಖ್ಯಂಮತ್ರಿಗಳು ಸ್ವಾಗತಕ್ಕೂ ಬಾರದೆ ಭದ್ರತೆಯಲ್ಲೂ ಲೋಪ ಮಾಡಿ, ಅವಮಾನ ಮಾಡಿರುವುದನ್ನು ದೇಶದ ಜನತೆ ಕ್ಷಮಿಸುವುದಲ್ಲ. ಕೂಡಲೇ ಪಂಜಾಬ್ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ವಜಾಡಬೇಕು ಎಂದು ಒತ್ತಾಯಿಸಿದರು.