ಹುಬ್ಬಳ್ಳಿ : ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅನಗತ್ಯ ಓಡಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಹುಬ್ಬಳ್ಳಿ-ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೊಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಲಾಭುರಾಮ್ ತಿಳಿಸಿದ್ದಾರೆ.
ನೈಟ್ ಕರ್ಪ್ಯೂ ಹಿನ್ನಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಇಂದು ರಾತ್ರಿ 10 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಯಾಗಲಿದೆ. ಎಲ್ಲೆಡೆಯೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ. ಅನಗತ್ಯ ಓಡಾಡುವವರ ವಿರುದ್ಧ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಎಪಿಎಂಸಿಯಲ್ಲಿ ನಾಳೆ ನಾಡಿದ್ದು ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬೇಕು. ಎಪಿಎಂಸಿಯಲ್ಲಿ ಹೆಚ್ಚಿನ ಪೊಲೀಸ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುವುದು. ನಿಯಮಗಳನ್ನು ಪಾಲಿಸುವ ಕುರಿತು ಎಪಿಎಂಸಿ ಅಧಿಕಾರಿಗಳ ಜೊತೆ ಮಾತುಕತೆ ಮಾಡಲಿದ್ದೇವೆ. ಅನಗತ್ಯವಾಗಿ ಓಡಾಟ ಮಾಡುವ ವಾಹನಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜನರು ಪೊಲೀಸ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.