ಹುಬ್ಬಳ್ಳಿ : ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಡಿ ವೆಂಕಟ್ ಕೊನಂಕಿ ನಿರ್ಮಾಣ ಮಾಡಿರುವ ಬೈ ಟು ಲವ್ ಸಿನಿಮಾ ಬಿಡುಗಡೆಯಾಗಿ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜನತೆ ಚಿತ್ರಕ್ಕೆ ಉತ್ತನ ಸ್ಪಂದನೆ ಸಿಕ್ಕಿದೆ ಎಂದು ಚಿತ್ರದ ನಿರ್ದೇಶಕ ಹರಿ ಸಂತೋಷ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದ ಪ್ರೇಮ ಕಹಾನಿಗೆ ಸಿನಿ ಪ್ರೀಯರು ಮೆಚ್ಚಿದ್ದಾರೆ.
ಚಿತ್ರದಲ್ಲಿ ಒಟ್ಟು 4 ಹಾಡುಗಳನ್ನು ಒಳಗೊಂಡಿದ್ದು, ಎಲ್ಲಾ ಹಾಡುಗಳು ಜನಪ್ರೀಯವಾಗಿವೆ ಎಂದರು .
ಚಿತ್ರದ ನಾಯಕ ನಟ ಧನ್ವೀರ್ ಮಾತನಾಡಿ, ಈ ಚಿತ್ರದಲ್ಲಿ ನಾನು ಲವರ್ ಬಾಯ್ ಆಗಿ ಕಾಣಿಸಿಕೊಂಡಿದೆ. ಚಿತ್ರ ರಾಜ್ಯಾದ್ಯಂತ ಉತ್ತಮ ಪ್ರದರ್ಶನಗೊಳ್ಳುತ್ತಿದೆ ಎಂದರು.
ಮಾಸ್ ಚಿತ್ರದಿಂದ ಲವರ್ ಬಾಯ್ ಆಗಿ ಅಭಿನಯಿಸಿದ್ದು, ಚಾಲೆಂಗ್ ಆಗಿ ಅನಿಸಿತು ಎಂದರು.
ಚಿತ್ರದ ನಾಯಕಿ ಶ್ರೀಲೀಲಾ ಅವರು ಮಾತನಾಡು, ಮಲೆನಾಡು ಹುಡ್ಗಿಯಾಗಿ ಕಾಣಿಸಿಕೊಂಡಿದ್ದೇನೆ. ಚಿತ್ರ ಉತ್ತಮವಾಗಿ ಮೂಡಿ ಬಂದಿದ್ದು, ಉತ್ತರ ಕರ್ನಾಟಕದ ಪ್ರೇಕ್ಷಕರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ ಎಂದರು.