ಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು
*ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ,ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪನೆ.
*ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ.
*ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಸಾಮರ್ಥ್ಯವನ್ನು 50 ಹಾಸಿಗೆಗಳಿಂದ 100 ಹಾಸಿಗೆಗಳಿಗೆ ಹೆಚ್ಚಿಸುವುದು.
*ಮಹಾದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ಹಂಚಿಕೆಯಾದ ನೀರಿನ ಬಳಕೆಗೆ ರಾಜ್ಯದ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗಳಿಗೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ಅಗತ್ಯ ತೀರುವಳಿಗಳನ್ನು ಪಡೆಯಲು ಕ್ರಮವಹಿಸಲಾಗುತ್ತಿದೆ.ಈ ಯೋಜನೆಗಳ ಅನುಷ್ಠಾನಕ್ಕೆ ಪ್ರಸಕ್ತ ಸಾಲಿನಲ್ಲಿ 1 ಸಾವಿರ ಕೋಟಿ ರೂ.ಅನುದಾನ ಒದಗಿಸಲಾಗಿದೆ.
*ಉತ್ತರ ಕರ್ನಾಟಕ ಭಾಗದಲ್ಲಿ ಹೈಟೆಕ್ ಚಿಕಿತ್ಸೆ ಸೌಲಭ್ಯ ಒದಗಿಸಲು ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ 250 ಕೋಟಿ ರೂ.
*ಉತ್ತರ ಕರ್ನಾಟಕದ ಬಹುದಿನಗಳ ನಿರೀಕ್ಷೆಯ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಯನ್ನು 927 ಕೋಟಿ ರೂ.ಅಂದಾಜು ವೆಚ್ಚದಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ.
*ಹುಬ್ಬಳ್ಳಿಯಲ್ಲಿ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ,ಮಾನವ ಸಂಪನ್ಮೂಲ ಒದಗಿಸಲು ಕ್ರಮ.
*ಚೆನ್ನೈ-ಬೆಂಗಳೂರು-ಮುAಬಯಿ ಕಯಗಾರಿಕಾ ಕಾರಿಡಾರ್ ವ್ಯಾಪ್ತಿಯಲ್ಲಿ ಧಾರವಾಡ ಸೇರಿ ಐದು ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ.
*ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮದಡಿ ತುಮಕೂರು ಹಾಗೂ ಧಾರವಾಡ ಪ್ರದೇಶಗಳ ಅಧಿಸೂಚನೆ.
*ಸಾಮಾಜಿಕ ಸೇವಾ ವಲಯದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಹುಬ್ಬಳ್ಳಿ ನವನಗರದ ಕರ್ನಾಟಕ ಕ್ಯಾನ್ಸರ್ ಸಂಸ್ಥೆಗೆ ವಿಶೇಷ ನೆರವು.
*ಧಾರವಾಡದಲ್ಲಿ ಕಸೂತಿ ಮೈಕ್ರೋ ಕ್ಲಸ್ಟರ್ ಹಾಗೂ ನವಲಗುಂದದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಜವಳಿ ಪಾರ್ಕ್ ಸ್ಥಾಪನೆ.ಉದೋಗ ಸೃಜನೆಗೆ ಕ್ರಮ.
*ಬೆಂಗಳೂರಿನಾಚೆ ಸ್ಟಾರ್ಟ ಅಪ್‌ಗಳ ಉತ್ತೇಜನಕ್ಕೆ ಮೈಸೂರು,ಮಂಗಳೂರು ಹಾಗೂ ಹುಬ್ಬಳ್ಳಿಯ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಕ್ಲಸ್ಟರ್‌ಗೆ 12 ಕೋಟಿ ರೂ.ಅನುದಾನ.
*ಪರಿಶಿಷ್ಠ ಜಾತಿ,ಪರಿಶಿಷ್ಠ ಪಂಗಡ,ಹಿಂದುಳಿದ ವರ್ಗ,ಅಲ್ಪಸಂಖ್ಯಾತರರು ಹಾಗೂ ಇತರೆ ವರ್ಗಗಳ ಮಕ್ಕಳಲ್ಲಿ ಉನ್ನತ ವಿದ್ಯಾಭ್ಯಾಸ ಪ್ರೋತ್ಸಾಹಿಸಲು ಧಾರವಾಡ ಸೇರಿ ಐದು ನಗರಗಳಲ್ಲಿ “ದೀನದಯಾಳ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ”ಗಳ ಸ್ಥಾಪನೆಗೆ 250 ಕೋಟಿ ರೂ.
*ಹುಬ್ಬಳ್ಳಿ-ಧಾರವಾಡ ಹಾಗೂ ಇತರೆ ಐದು ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳ ಸ್ಥಾಪನೆ.
*ಧಾರವಾಡ ಎಫ್.ಎಂ.ಸಿ.ಜಿ.ಕ್ಲಸ್ಟರ್ ಸ್ಥಾಪನೆ,ವಿಶೇಷ ಪ್ರೋತ್ಸಾಹಕ ಪ್ಯಾಕೇಜ್.
* ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ವಿಜ್ಞಾನ ತತ್ವಗಳನ್ನು ಅರ್ಥ ಮಾಡಿಕೊಳ್ಳಲು ರಾಜ್ಯದ 169 ಬಾಲಕಿಯರ ಪ್ರೌಢಶಾಲೆಗಳಿಗೆ ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದಿAದ ಲ್ಯಾಬ್ ಇನ್ ಎ ಕಿಟ್‌ಗಳ ಪೂರೈಕೆ.