ಧಾರವಾಡ : ಮದುವೆ ಯಲ್ಲಿ ಊಟದ ವಿಚಾರವಾಗಿ ಆರಂಭವಾಗಿದ್ದ ಇಬ್ಬರ ನಡುವಿನ ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡ ಘಟನೆ ಧಾರವಾಡದ ಪೆಂಡಾರ್ ಗಲ್ಲಿಯಲ್ಲಿ ನಡೆದಿದೆ.
ಸಾದಿಕ್ ಬಿಡ್ನಾಳ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಪೆಂಡಾರ್ ಗಲ್ಲಿಯ ಮನೆಯೊಂದರಲ್ಲಿ ಮದುವೆ ಸಮಾರಂಭ ನಡೆಯುತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆ ಬಂದಂತಹ ಅತಿಥಿಗಳಿಗೆ ವೆಜ್ ಹಾಗೂ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಚಿಕನ್ ಪೀಸ್ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಈ ವೇಳೆ ಮಧ್ಯ ಪ್ರೆವೇಶ ಮಾಡಿದ ಸಾದಿಕ್ ಇಬ್ಬರು ವ್ಯಕ್ತಿಗಳನ್ನು ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ ನೂಕಾಟ ತಳ್ಳಾಟ ನಡೆದಿದ್ದು, ಸಾದಿಕ್ ಕೆಳಗೆ ಬಿದಿದ್ದಾರೆ. ಆಗ ಸಾದಿಕ ತಲೆಯ ಭಾಗಕ್ಕೆ ತೀವ್ರವಾದ ಪೆಟ್ಟು ಬಿದಿದೆ. ಪೆಟ್ಟು ಬಿದಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ಸಾದಿಕ್‌ನನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಎಲು ಹೋಗಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆ ಸೇರಿಸುವ ಮುನ್ನವೇ ಸಾದಿಕ್ ಸಾವನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಶಹರ ಠಾಣೆಯ ಪೊಲೀಸರು ಪರಿಶೀಲನೆ ಕೈಗೊಂಡು, ರಿಜ್ವಾನ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಲರಣ ದಾಖಲಾಗಿದೆ.