ಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಆಮ್ ಆದ್ಮಿ ಪಕ್ಷದಿಂದ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಆಪ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಹಾಗೂ ಆಪ್ ಪರ ಜೈಕಾರಗಳನ್ನು ಹಾಕಿ ತಮಟೆ ವಾದ್ಯಗಳನ್ನು ಬಡೆದು ನೆರೆದಿದ್ದವರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಧಾರವಾಡ ಜಿಲ್ಲಾಧ್ಯಕ್ಷರಾದ ಅನಂತಕುಮಾರ್ ಬುಗಡಿ ಮಾತನಾಡಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ನೇತೃತ್ವದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್ ಜಯಗಳಿಸಿದೆ. ಇದು ಇತಿಹಾಸದಲ್ಲಿಯೇ ಹಸ್ತಾಕ್ಷರದಿಂದ ಬರೆದಿಡುವಂತಹ ದಿನವಾಗಿದೆ. ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದರು.
