ಧಾರವಾಡ : ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಹಾಕಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಗಣೇಶನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಗಣೇಶನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.