ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆಯಲ್ಲಿ ನೆತ್ತರು ಹರೆದಿದ್ದು, ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ.
ಹೌದು… ಹುಬ್ಬಳ್ಳಿಯ ಕೃಷ್ಣ ಭವನದ ಎದುರಿನಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕೊಲೆಯಾದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಬೆಳಿಗ್ಗೆ ರಕ್ತ ನೋಡಿದ ಜನರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು ಸುಮಾ ಎಂದು ಅಂದಾಜಿಸಲಾಗಿದ್ದು ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ. ಭೇಟಿ ನೀಡಿ ಪರಿಶೀಲನೆ ನಡೆಸಿದರು.