ಹುಬ್ಬಳ್ಳಿ : ಬರುವ ಮಾರ್ಚ 30 ರಂದು ಬಜೆಟ್ ಅಧಿವೇಶನವು ಮುಕ್ತಾಯವಾಗುತ್ತದೆ. ಈಗಾಗಲೇ ಬಜೆಟ್ ಘೋಷಣೆಗಳ ಕುರಿತಂತೆ ಸದನದಲ್ಲಿಯು ಚರ್ಚೆ ಮಾಡಲಾಗುತ್ತಿದೆ. ಹಾಗಾಗಿ ಬಜೆಟ್ ಅಧಿವೇಶನ ಮುಗಿಯುತ್ತಿದ್ದ ಹಾಗೇ ಬಜೆಟ್‌ನ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಧಿಕಾರಿಗಳಿ ಈ ಕುರಿತು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾನಾಡಿದ ಅವರು, ಬಜೆಟ್‌ನಲ್ಲಿ ಘೋಷಣೆಯಾದ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಾಗುತ್ತಿದೆ. ಎಪ್ರಿಲ್ 30 ರ ಒಳಗಡೆಯಲ್ಲಿಯೇ ಎಲ್ಲ ಕಾರ್ಯಕ್ರಮಗಳ ಕಾರ್ಯಾದೇಶವನ್ಮು ನೀಡುತ್ತೇನೆ. ಎಲ್ಲ ಕಾರ್ಯಕ್ರಮಗಳ ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಬೇಕು ಹಾಗೂ ಹಣಕಾಸು ನಿರ್ವಹಣೆಯು ಸರಿಯಾದ ರೀತಿಯಾಲ್ಲಿ ಆಗಬೇಕು ಎನ್ನುವ ಉದ್ದೇಶದಿಂದ ಚಿಪ್ ಸೆಕ್ರೆಟರಿ ನೇತೃತ್ವದಲ್ಲಿ ಸಮಿತಿ ಕೂಡಾ ರಚನೆ ಮಾಡಲಾಗುವುದು. ಅದಕ್ಕೆ ಸೋಮಾವಾರ ಅಧಿಕೃತ ಆದೇಶವನ್ನು ಮಾಡಲಾಗುವುದು ಎಂದರು.
ಅಂತರರಾಜ್ಯ ಜಲ ವಿವಾದ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡಲಾಗುವುದು
ಅಂತರಾಜ್ಯ ಜಲವಿವಾದ ಪ್ರಮುಖವಾದ ಕೆಲಸಗಳಲ್ಲಿ ಮುಖ್ಯವಾದುದ್ದಾಗಿದೆ. ಸಮಸ್ಯೆ ಪರಿಹಾರಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ರಾಜ್ಯದ ಪರ ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ವಿಚಾರ ಮಂಡನೆಯನ್ನು ನಮ್ಮ ನ್ಯಾಯಾಧೀಶರು ಮಾಡುತ್ತಿದ್ದಾರೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಅದರ ಕುರಿತು ಹೆಚ್ಚಿನ ಗಮನ ಹರಿಸಲಾಗುವುದು. ಕೇಂದ್ರದಿಂದಲ್ಲೂ ಕೂಡಾ ಅನುಮತಿಯನ್ನು ಪಡೆದುಕೊಳ್ಳವ ದೃಷ್ಠಿಯಿಂದ ಇಲಾಖೆಯ ಅಧಿಕಾರಿಗಳಿಗೆ ಸಿದ್ಧತೆ ಮಾಡಿಕೊಳ್ಳಲು ಹೇಳಲಾಗಿದೆ. ಎಪ್ರಿಲ್ ಮೊದಲ ವಾರದಲ್ಲಿ ಕೇಂದ್ರದ ನಾಯಕರನ್ನು ಭೇಟಿ ಮಾಡಿ ಮಾತನಾಡಲಾಗುವುದು ಎಂದು ತಿಳಿಸಿದರು.
SSLC ಮಕ್ಕಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಎದುರಿಸಬೇಕು
ಎಸ್ ಎಸ್ ಎಲ್ ಸಿ ಪರೀಕ್ಷೆಯ ಕುರಿತಂತೆ ಈಗಾಗಲೇ ಎಲ್ಲ ತಯಾರಿಗಳನ್ನು ಮಾಡಲಾಗಿದೆ. ಶಿಕ್ಷಣ ಇಲಾಖೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಂಡಿದೆ. ಎಸ್‌ಎಸ್‌ಎಲ್‌ಸಿಯ ಮಕ್ಕಳೆಲ್ಲರು ಪರೀಕ್ಷೆಯನ್ನು ಬರೆಯುವ ಮೂಲಕ, ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಯಾವುದೇ ಆತಂಕವಿಲ್ಲದೆ ಮಕ್ಕಳೆಲ್ಲರು ಪರೀಕ್ಷೆಯಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.