Home / Top News / ಪೆಟ್ರೋಲ್, ಡಿಸೇಲ್, ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ ಪಕ್ಷದಿಂದ ಪ್ರತಿಭಟನೆ

ಪೆಟ್ರೋಲ್, ಡಿಸೇಲ್, ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ ಪಕ್ಷದಿಂದ ಪ್ರತಿಭಟನೆ

Spread the love

ಹುಬ್ಬಳ್ಳಿ : ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಭಾಗವಾಗಿ ಸಿಲಿಂಡರ್, ಸ್ಕೂಟರ್, ಬೈಕ್ ಗಳಿಗೆ ಹೂವಿನ ಹಾರ ಹಾಕಿ, ಹಲಗಿ ಬಾರಿಸುವ ಮೂಲಕ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆಯನ್ನು ನಗರದ ಗೋಪನಕೊಪ್ಪ ವೃತ್ತದಲ್ಲಿಂದು ನಡೆಸಲಾಯಿತು.

ವಿದ್ಯಾನಗರ ಮತ್ತು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ಆಡಳಿತರೂಢ ಬಿಜೆಪಿ ಸರ್ಕಾರದ ದುಬಾರಿ ಆಡಳಿತದಿಂದ ಜನರು ರೋಸಿ ಹೋಗಿದ್ದು, ಜನಸಾಮಾನ್ಯರನ್ನು ಸಂಕಷ್ಟಕ್ಕೀಡು ಮಾಡುವಂತ ಕೆಲಸ ಮಾಡುತ್ತಿದೆ. ಬೆಲೆ ಏರಿಕೆಯಿಂದ ಬೆಂದು ಹೋಗಿರುವ ಜನತೆ ಬದಲಾವಣೆ ಬಯಸುತ್ತಿದೆ‌ ಎಂದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತ ಸುನೀಲ್ ಮಠಪತಿ, ಪೆಟ್ರೋಲ್, ಡಿಸೇಲ್, ಸಿಲಿಂಡರ್ ಬೆಲೆ ಗಗನಕ್ಕೆ ಏರುತ್ತಿದ್ದು, ಜನಸಾಮಾನ್ಯರು ನಲಗುವಂತಾಗಿದೆ. ಬಿಜೆಪಿ ಸರ್ಕಾರ ಬರೀ ತೆರಗೆ ವಸೂಲಿ ಮಾಡುತ್ತಿದ್ದಾರೆಯೇ ಹೊರತು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಸುವರ್ಣ ಕಲಕುಂಟ್ಲಾ, ಪ್ರಕಾಶ ಕುರಹಟ್ಟಿ, ಸಂದೀಲ್ ಕುಮಾರ್, ಮಹಮ್ಮದ್ ಶರೀಫ ಗರಗದ, ದೀಪಾ ಗೌರಿ, ಬಂಗಾರೇಶ ಹಿರೇಮಠ, ಶಾಕೀರ್ ಸನದಿ, ಅಶೋಕ ಕಲಾದಗಿ, ಬಸವರಾಜ ತಮ್ಮಣ್ಣವರ ಸೇರಿದಂತೆ ಉಪಸ್ಥಿತರಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]