ಹುಬ್ಬಳ್ಳಿ -ಧಾರವಾಡ್ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ಕಾಂಗ್ರೆಸ್ ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಹೇಳಿದರು .
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ನಾನು ಕೂಡ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ಹೇಳಿದರು .
ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ . ಹಾಗೂ ಬೇರೆಯವರಿಗೆ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡಿದರೆ ಅವರಿಗೆ ಬೆಂಬಲಿಸಿ
ಅವರನ್ನು ಸೆಂಟ್ರಲ್ ಕ್ಷೇತ್ರದಿಂದ ಗೆಲುವು ಸಾಧಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರು .