Home / Top News / ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

Spread the love

ಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಯುಗಾದಿ ಸಂಭ್ರಮ ಕಳೆಗಟ್ಟಿದ್ದುಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಹೌದು ಹುಬ್ಬಳ್ಳಿ ಯಲ್ಲಿ ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ. ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ ಕಟ್ಟಲಾದ ದೇವಸ್ಥಾನವಾಗಿದ್ದು, ಚತುರ್ಮುಖ ಶಿವಲಿಂಗ ಇಲ್ಲಿನ ವಿಶೇಷವಾಗಿದೆ. ಯುಗಾದಿ ಹಬ್ಬದ ದಿನ ಬೆಳಗ್ಗೆ 6-45 ರಿಂದ 7 ಗಂಟೆಯವರೆಗೆ ಈ ಚತುರ್ಮುಖ ಲಿಂಗದ ಮೇಲೆ ಸೂರ್ಯರಶ್ಮಿ ಬೀಳುವುದು ವಿಶೇಷವಾಗಿದೆ. ಈ ಸಂದರ್ಭದಲ್ಲಿ ಅನೇಕ ಭಕ್ತರು ದೇವರ ದರ್ಶನ ಪಡೆದು ಧನ್ಯರಾಗುತ್ತಾರೆ.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]