ಹುಬ್ಬಳ್ಳಿ : ಕೆಲ ದಿನದ ಹಿಂದೆ ಬೆಂಗಳೂರಿನ ಕೆಲ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಯೂ ಖಾಕಿ ಪಡೆ ಅಲರ್ಟ್ ಆಗಿದೆ. ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಖಾಕಿ ಪಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿದೆ.
ಇದೇ ಕೇಂದ್ರದಲ್ಲಿ ಅಭಿಷೇಕ್ ಹಿರೇಮಠ, ಹಳೇ ಹುಬ್ಬಳ್ಳಿ ಗಲಭೆಯ ರೂವಾರಿಯಾಗಿದ್ದು, ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
