ಹುಬ್ಬಳ್ಳಿ : ಸಿದ್ಧರಾಮಯ್ಯ ಓರ್ವ ಅಸಮರ್ಥ ರಾಜಕಾರಣಿ. ಅವರು ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳೇ ಈಗಿನ ಕೋಮು ಗಲಭೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಇಂದು ಮಾದ್ಯಮ ವರದಿಗರರೊಂದಿಗೆ ಮಾತನಾಡಿದ ಅವರು . ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆದೆವು. ಕೇರಳದಿಂದಲೂ ಬಂದು ಇಲ್ಲಿ ಗಲಭೆಗಳನ್ನು ಸೃಷ್ಟಿಸಿದರು. ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಬಿಟ್ಟು ಸಾಫ್ಟ್ ಕಾರ್ನರ್ ತೋರಿಸಿದರು. ಅಪರಾಧಿಗಳಿಗೆ ಬಿಡುಗಡೆ ಭಾಗ್ಯ ನೀಡಿದರು. ಅಂದು ಜೈಲಿನಿಂದ ಬಿಡುಗಡೆ ಮಾಡಿದ್ದೇ ಇಂದು ಗಲಭೆಗಳಿಗೆ ಪ್ರೇರಣೆಯಾಗಿದೆ. ಇಂಥವರು ನಮ್ಮ ಸರ್ಕಾರದ ಬಗ್ಗೆ ಮಾತಾಡ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಕಿಡಿ ಕಾರಿದರು.
Hubli News Latest Kannada News