Home / Top News / ಹುಬ್ಬಳ್ಳಿಯಲ್ಲಿ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಕಾಲು ಕಟ್

ಹುಬ್ಬಳ್ಳಿಯಲ್ಲಿ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಕಾಲು ಕಟ್

Spread the love

ಹುಬ್ಬಳ್ಳಿ: ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ.

ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ಹೆಗ್ಗೇರಿ ನಿವಾಸಿಯೊರ್ವ ಸಿಲುಕಿದ್ದು, ರೈಲು ಹುಬ್ಬಳ್ಳಿ ನಿಲ್ದಾಣದಿಂದ‌ ಹೊರಟ ನಾಲ್ಕೈದು ನಿಮಿಷದಲ್ಲಿ ಈ ಘಟನೆ ನಡೆದಿದೆ.

ರೈಲು ಚಲಿಸುತ್ತಿದ್ದ ಹಳಿ ಮೇಲೆ ವ್ಯಕ್ತಿ ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿ ಹಾರ್ನ್ ಮಾಡಿದ್ದಾರೆ. ಆದರೆ ವ್ಯಕ್ತಿ ಹಳಿಯ ಮೇಲಿಂದ ಆಚೆ ಸರಿಯದೇ ಅಲ್ಲೇ ನಿಂತಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ ಚಲಿಸುತ್ತಿದ್ದ ರೈಲನ್ನು ನಿಲ್ಲಿಸಿದ್ದಾರೆ.

ಎಂಜಿನ್ ಹಾಗೂ ಮೂರ್ನಾಲ್ಕು ಬೋಗಿಗಳು ಕಾಲ ಮೇಲೆ ಹರಿದ ಕಾರಣ ಒಂದು ಕಾಲು ಸಂಪೂರ್ಣ ತುಂಡಾಗಿದ್ದು, ಇನ್ನೊಂದು ಕಾಲು ಅರ್ಧ ತುಂಡಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]