ಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.
ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
Hubli News Latest Kannada News