ಹುಬ್ಬಳ್ಳಿ : ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡ್ತಿಲ್ಲ. ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಅವರು ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದರು.
ನಗರದಲ್ಲಿಂದು ಮಾತನಾಡಿದ ಅವರು,ಆರ್ ಎಸ್ ಎಸ್ ಚಡ್ಡಿ ಕುರಿತ ಸಿದ್ಧರಾಮಯ್ಯ ಹೇಳಿಕೆಗೆ ಗರಂ ಆದ ಜಗದೀಶ ಶೆಟ್ಟರ್,
ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿದ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ. ದೇಶ ಉಳಿದಿದೆ. ಅವರು ಆರ್ ಎಸ್ ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದ ಎಂದುಕೊಂಡಿದ್ದಾರೆ. ಇದೇ ಸಿದ್ದರಾಮಯ್ಯಗೆ ತಿರುಗು ಬಾಣವಾಗುತ್ತೆ. ಪದೇ ಪದೇ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ರೆ ಸಿದ್ದರಾಮಯ್ಯಗೆ ಉಳಿಗಾಲವಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗಿದೆ. ಸಿದ್ದರಾಮಯ್ಯನವರು ಇದನ್ನು ಅರಿತು ಮಾತನಾಡಬೇಕು. ಇಲ್ಲದಿದ್ದಲ್ಲಿ ಕಾಂಗ್ರೆಸ್ ಸರ್ವನಾಶ ಖಚಿತ ಎಂದರು.
ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಚುನಾವಣಾ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಮತದಾರರ ಒಲವಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.