ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸೇರಿದಂತೆ ಹುಬ್ಬಳ್ಳಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ರೌಡಿಗಳ ಪರೇಡ್ ನಡೆಯಿತು. ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ
ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆತಂದಿದ್ದರು. ಡಿಸಿಪಿ ಸಾಹಿಲ್ ಬಾಗ್ಲಾ ರೌಡಿಗಳಿಗೆ ವಾರ್ನ್ ಮಾಡಿದರು.
ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಕೋಕಾ ಸೇರಿದಂತೆ ಇತರೇ ಕಾಯ್ದೆ ಪ್ರಯೋಗ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇಂದು ಇನ್ನೂರಕ್ಕೂ ಹೆಚ್ಚು ರೌಡಶೀಟರ್ ಗಳ ಪರೇಡ್ ಮಾಡಲಾಯಿತು.
Hubli News Latest Kannada News