ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ತಂಗಿಯನ್ನ ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿ ಠ ಧಾರವಾಡ ಕಾಲೋನಿಯಲ್ಲಿ ನಡೆದಿದೆ.
ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಾದ ಯುವತಿ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವರು ಚಾಕು ಇರಿದಿದ್ದಾರೆ.
ತೀವ್ರ ಗಾಯವಾಗಿರುವ ಚಂದ್ರುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.