ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕೊನೆಗೂ ಸದನ ಸಮತಿ ವರದಿ ಹಿನ್ನೆಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು.
ನಗರದಲ್ಲಿಂದು ಬೆಳಗ್ಗೆಯಿಂದಲೂ ನಿರಂತರ ಗುಪ್ತ ಸಭೆ ಹಾಗೂ ಹಿರಿಯ ಅಧಿಕಾರಿಗಳು, ಜನಪ್ರತಿನಧಿಗಳ ಮಾಹಿತಿ ಹಾಗೂ ಸದನ ಸಮಿತಿ ವರದಿ ಮೇಲೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ಕಲ್ಪಿಸಲಾಗಿದೆ.
ಗಣೇಶ ಪ್ರತಿಷ್ಠಾಪನೆಗಾಗಿ ಒಟ್ಟು 6 ಹಿಂದುಪರ ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಸಮಿತಿಯನ್ನ ರಚನೆ ಮಾಡಲಾಗಿತ್ತು.
ಸಮಿತಿ ಗಣೇಶ ಪ್ರತಿಷ್ಠಾಪನೆ ಅವಕಾಶ ಮಾಡಿಕೊಡುವಂತೆ ವರದಿ ನೀಡಿತ್ತು. 6 ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.
ಒಟ್ಟು ಮೂರು ದಿನಗಳ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ ಎಂದರು.